Posts

Showing posts from September, 2014

Permanent Lok Adalat

Image
ಖಾಯಂ ಜನತಾ ನ್ಯಾಯಾಲಯಗಳು
- ಅಶ್ವತ್ಥ ನಾರಾಯಣ,
ಅಧ್ಯಕ್ಷರು,
ಖಾಯಂ ಜನತಾ ನ್ಯಾಯಾಲಯ,
ಬೆಂಗಳೂರು.


        ನ್ಯಾಯಾಲಯಗಳಲ್ಲಿ ವಿವಾದಗಳ ತೀರ್ಮಾನವು ಹಲವಾರು ಕಾರಣಗಳಿಂದಾಗಿ ವಿಳಂಭವಾಗುತ್ತಿದೆ ಎನ್ನುವುದು ಸರ್ವೇ ಸಾಮಾನ್ಯದ ಮಾತು. ಆದರೆ, ಸಾರ್ವಜನಿಕ ಉಪಯುಕ್ತತಾ ಸೇವೆ (Public Utility Services)ಗಳಿಗೆ ಸಂಬಂಧಿಸಿದಂತೆ ಉದ್ಭವಿಸುವ ವಿವಾದಗಳ ಅತಿ ಶೀಘ್ರ ಹಾಗೂ ಖರ್ಚಿಲ್ಲದ ತೀರ್ಮಾನಕ್ಕೆ ಖಾಯಂ ಜನತಾ ನ್ಯಾಯಾಲಯಗಳು (Permanent Lok Adalat) ವರವೆಂದೇ ಹೇಳಬಹುದು. 1987ರ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯನ್ನು 2002ರಲ್ಲಿ ಕೇಂದ್ರ ಸರ್ಕಾರವು ತಿದ್ದುಪಡಿ ಮಾಡಿ, VI A ನೇ ಅಧ್ಯಾಯವನ್ನು ಹೊಸದಾಗಿ ಸೇರಿಸುವುದರ ಮೂಲಕ ಖಾಯಂ ಜನತಾ ನ್ಯಾಯಾಲಯಗಳನ್ನು ಅಸ್ಥಿತ್ವಕ್ಕೆ ತಂದಿದೆ. ಆ ಪ್ರಕಾರ, 2007ರಲ್ಲಿ ಕರ್ನಾಟಕ ಸರ್ಕಾರವು ಬೆಂಗಳೂರು, ಬೆಳಗಾವಿ, ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ಖಾಯಂ ಜನತಾ ನ್ಯಾಯಾಲಯಗಳನ್ನು ಸ್ಥಾಪಿಸಿದೆ.
        ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ವಿವಾದಗಳು ಬೆಂಗಳೂರಿನ ಖಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತವೆ. ಹಾಗೆಯೇ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ವಿವಾದಗಳು ಬೆಳಗಾವಿ ಖಾಯಂ ಜನತಾ ನ್ಯಾಯಾಲಯಕ್ಕೆ; ಬಳ್ಳಾರಿ, ಧಾರವಾಡ, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ…